ಯೆಶಾಯ 9:20

ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.

ಸಂದರ್ಭದೊಂದಿಗೆ ಓದಿ · ಯೆಶಾಯ 9

18ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ.

19ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.

20ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.

21ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.

ಯೆಶಾಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी