ಪ್ರಲಾಪಗಳು 2:2

ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 2

1ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!

2ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.

3ಆತನು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಕಡಿದು ಹಾಕಿದ್ದಾನೆ. ಆತನು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾನೆ. ಆತನು ಸುತ್ತಲೂ ಪ್ರಜ್ವಲಿಸಿ ದಹಿಸುವ ಬೆಂಕಿಯ ಹಾಗೆ ಯಾಕೋಬನಿಗೆ ವಿರುದ್ಧ ವಾಗಿ ದಹಿಸಿಬಿಟ್ಟಿದ್ದಾನೆ.

4ಆತನು ಶತ್ರುವಿನ ಹಾಗೆ ತನ್ನ ಬಿಲ್ಲನ್ನು ಬೊಗ್ಗಿಸಿದ್ದಾನೆ, ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾನೆ. ಆತನು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್‌ ಮಗಳ ಗುಡಾರದಲ್ಲಿ ಸುರಿದಿದ್ದಾನೆ.

ಪ್ರಲಾಪಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी