ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.
32ಅದರ ಮಧ್ಯದಲ್ಲಿ ಮೇಲ್ಗಡೆ (ತಲೆದೂರಿಸುವದಕ್ಕೆ) ರಂಧ್ರವಿರಬೇಕು. ಆ ರಂಧ್ರದ ಸುತ್ತಲೂ ಹೆಣಿಗೆಯ ಕೆಲಸದ ಗೋಟಿರ ಬೇಕು. ಅದು ಹರಿಯದ ಹಾಗೆ ಅದಕ್ಕೆ ರಂಧ್ರದ ಕವಚವಿರಬೇಕು.
33ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು.
34ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.
35ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಕರ್ತನ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ ಅವನು ಸಾಯದಂತೆ ಅವುಗಳ ಶಬ್ದವು ಕೇಳಿಸಬೇಕು.
36ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ