ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.
9ಇದಲ್ಲದೆ ಆಗುವದೇನಂದರೆ, ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂತ ಸಮಸ್ತ ಜೀವಿಗಳು ಬದುಕುವವು ಮತ್ತು ವಿಾನುಗಳು ಬಹು ದೊಡ್ಡ ಸಮೂಹವಾಗುವವು. ಈ ನೀರು ಅಲ್ಲಿಗೆ ಬರುವಾಗ ಅವು ಸ್ವಸ್ಥವಾಗುವವು; ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವವು.
10ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
11ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.
12ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
13ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶ ವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾ ಗಿದೆ; ಯೋಸೇಫನಿಗೆ ಎರಡು ಪಾಲುಗಳು ಕೊಡಲ್ಪ ಟ್ಟಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ