ಯೆಹೋಶುವ 8:32

ಅಲ್ಲಿ ಅವನು ಮೋಶೆ ಇಸ್ರಾಯೇಲ್‌ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 8

30ಆಗ ಯೆಹೋಶುವನು ಕರ್ತನ ಸೇವಕನಾದ ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿದ ಹಾಗೆ ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆಯಲ್ಪ ಟ್ಟಿರುವ ಹಾಗೆ ಏಬಾಲ್‌ ಪರ್ವತದಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಉಳಿ ಮುಟ್ಟದ ಪೂರ್ಣವಾದ ಕಲ್ಲುಗಳಿಂದ ಒಂದು ಬಲಿಪೀಠವನ್ನು ಕಟ್ಟಿದನು.

31ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.

32ಅಲ್ಲಿ ಅವನು ಮೋಶೆ ಇಸ್ರಾಯೇಲ್‌ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.

33ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್‌ ಪರ್ವತದ ಕಡೆಗೂ ಅರ್ಧ ಏಬಾಲ್‌ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.

34ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.

ಯೆಹೋಶುವ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी