ಯೆರೆಮಿಯ 31:32

ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 31

30ಆದರೆ ಒಬ್ಬೊಬ್ಬನು ಸ್ವಂತ ಅಕ್ರಮಕ್ಕಾಗಿ ಸಾಯುವನು. ಹುಳಿ ದ್ರಾಕ್ಷೇಯನ್ನು ತಿಂದ ಮನುಷ್ಯನು ಯಾವನೋ ಅವನ ಹಲ್ಲುಗಳೇ ಚಳಿತು ಹೋಗುವವು.

31ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.

32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.

33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.

34ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.

ಯೆರೆಮಿಯ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी