೧ ಅರಸುಗಳು 1:46

ನೀವು ಕೇಳುವ ಶಬ್ದವು ಇದೇ. ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 1

44ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.

45ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಏರಿಸಿ ಯಾಜಕನಾದ ಚಾದೋಕನೂ ಪ್ರವಾದಿ ಯಾದ ನಾತಾನನೂ ಅವನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ; ಅವರು ಸಂತೋಷ ಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲ ವಾಯಿತು.

46ನೀವು ಕೇಳುವ ಶಬ್ದವು ಇದೇ. ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.

47ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು.

48ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.

೧ ಅರಸುಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी