ಮಾರ್ಕನು 13:7

ಇದಲ್ಲದೆ ಯುದ್ಧಗಳ ವಿಷಯವಾಗಿಯೂ ಯುದ್ಧಗಳ ಸುದ್ಧಿಯ ವಿಷಯವಾಗಿಯೂ ನೀವು ಕೇಳುವಾಗ ಕಳವಳಪಡ ಬೇಡಿರಿ; ಯಾಕಂದರೆ ಅವುಗಳು ಆಗುವದು ಅಗತ್ಯ; ಆದರೆ ಇನ್ನೂ ಅದು ಅಂತ್ಯವಲ್ಲ.

ಸಂದರ್ಭದೊಂದಿಗೆ ಓದಿ · ಮಾರ್ಕನು 13

5ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ;

6ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.

7ಇದಲ್ಲದೆ ಯುದ್ಧಗಳ ವಿಷಯವಾಗಿಯೂ ಯುದ್ಧಗಳ ಸುದ್ಧಿಯ ವಿಷಯವಾಗಿಯೂ ನೀವು ಕೇಳುವಾಗ ಕಳವಳಪಡ ಬೇಡಿರಿ; ಯಾಕಂದರೆ ಅವುಗಳು ಆಗುವದು ಅಗತ್ಯ; ಆದರೆ ಇನ್ನೂ ಅದು ಅಂತ್ಯವಲ್ಲ.

8ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.

9ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.

ಮಾರ್ಕನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी