ಮತ್ತಾಯನು 8:28

ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.

ಸಂದರ್ಭದೊಂದಿಗೆ ಓದಿ · ಮತ್ತಾಯನು 8

26ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.

27ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.

28ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.

29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.

30ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.

ಮತ್ತಾಯನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी