ಇಬ್ರಿಯರಿಗೆ 13:4

ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 13

2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.

3ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.

4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.

5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.

6ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.

ಇಬ್ರಿಯರಿಗೆ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी