ಯೆಶಾಯ 16:10

ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 16

8ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು.

9ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.

10ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ.

11ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್‌ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.

12ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.

ಯೆಶಾಯ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी