ಎಜ್ರನು 6:3

ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;

ಸಂದರ್ಭದೊಂದಿಗೆ ಓದಿ · ಎಜ್ರನು 6

1ಆಗ ಅರಸನಾದ ದಾರ್ಯಾವೆಷನ ಅಪ್ಪ ಣೆಯ ಪ್ರಕಾರ ಅವರು ಪುಸ್ತಕ ಶಾಲೆ ಯಾಗಿದ್ದ ಬಾಬೆಲಿನ ಬೊಕ್ಕಸಗಳಲ್ಲಿ ಹುಡುಕಿದರು.

2ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು.

3ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;

4ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ.

5ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.

ಎಜ್ರನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी