೨ ಸಮುವೇಲನು 5:19

ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 5

17ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.

18ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್‌ ತಗ್ಗಿನಲ್ಲಿ ಇಳುಕೊಂಡರು.

19ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.

20ಆದಕಾರಣ ದಾವೀದನು ಬಾಳ್‌ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್‌ ಎಂದು ಹೆಸರಿ ಟ್ಟನು.

21ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.

೨ ಸಮುವೇಲನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी