ಎಜ್ರನು 9:11

ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.

ಸಂದರ್ಭದೊಂದಿಗೆ ಓದಿ · ಎಜ್ರನು 9

9ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.

10ಹಾಗಾದರೆ ನನ್ನ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ಪ್ರವಾದಿಗಳಾದ ನಿನ್ನ ಸೇವಕರ ಮುಖಾಂತರ ನೀನು ಆಜ್ಞಾಪಿಸಿದ ನಿನ್ನ ಆಜ್ಞೆಗಳನ್ನು ತೊರೆದಿದ್ದೇವೆ.

11ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.

12ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.

13ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ

ಎಜ್ರನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी