ಆದಿಕಾಂಡ 19:12

ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 19

10ಆಗ ಆ ಮನುಷ್ಯರು (ಲೋಟನ ಬಳಿಗೆ ಬಂದಿದ್ದವರು) ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು.

11ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.

12ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.

13ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.

14ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.

ಆದಿಕಾಂಡ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी