ಕೀರ್ತನೆಗಳು 65:9

ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 65

7ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,

8ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರು ಸಹ ನಿನ್ನ ಗುರುತುಗಳಿಗೆ ಭಯಪಡುವರು. ಉದಯಾಸ್ತ ಮಾನ ಸಮಯಗಳನ್ನು ಉತ್ಸಾಹಧ್ವನಿಗೈಯುವಂತೆ ನೀನು ಮಾಡುತ್ತೀ.

9ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.

10ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ.

11ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ.

ಕೀರ್ತನೆಗಳು 65 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी