ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.
21ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
22ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ,
23ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.
24ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.
25ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ