ಮತ್ತಾಯನು 12:12

ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್‌ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 12

10ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್‌ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.

11ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್‌ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?

12ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್‌ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.

13ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.

14ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.

ಮತ್ತಾಯನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी