ನ್ಯಾಯಸ್ಥಾಪಕರು 9:31

ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ--ಇಗೋ, ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ ಮತ್ತು ಇಗೋ, ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಾರೆ.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 9

29ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುವೆನು. ಅವನು ಅಬೀಮೆಲೆಕನಿಗೆ--ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ ಅಂದನು.

30ಆ ಪಟ್ಟಣದ ಅಧಿಪತಿಯಾದ ಜೆಬುಲನು ಎಬೆದನ ಮಗನಾದ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು

31ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ--ಇಗೋ, ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ ಮತ್ತು ಇಗೋ, ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಾರೆ.

32ಆದದ ರಿಂದ ಈಗ ನೀನೂ ನಿನ್ನ ಸಂಗಡ ಇರುವ ಜನರೂ ಕೂಡಿ ರಾತ್ರಿಯಲ್ಲಿ ಎದ್ದು ಹೊಲದಲ್ಲಿ ಹೊಂಚಿಕೊಳ್ಳ ಬೇಕು.

33ಹೊತ್ತಾರೆ ಸೂರ್ಯನು ಉದಯಿಸುವಾಗ ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು; ಇಗೋ, ಅವನೂ ಅವನ ಸಂಗಡ ಇರುವ ಜನರೂ ನಿಮಗೆದು ರಾಗಿ ಹೊರಟು ಬರುವಾಗ ನಿನಗೆ ಅನುಕೂಲ ತೋರಿದ ಹಾಗೆ ಅವನಿಗೆ ಮಾಡಬಹುದು ಎಂದು ಹೇಳಿದನು.

ನ್ಯಾಯಸ್ಥಾಪಕರು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी