ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು.
33ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
34ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.
35ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು.
36ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
37ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ