ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ; ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು.
18ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು.
19ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ.
20ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ; ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು.
21ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.
22ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ