ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆ ಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಉಂಟಾ ಯಿತು.
1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆ ಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಉಂಟಾ ಯಿತು.
2ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;
3ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ