ಲೂಕನು 9:10

ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.

ಸಂದರ್ಭದೊಂದಿಗೆ ಓದಿ · ಲೂಕನು 9

8ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು.

9ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು.

10ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.

11ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.

12ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी