ಯಾಜಕಕಾಂಡ 23:20

ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 23

18ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.

19ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು.

20ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.

21ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.

22ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.

ಯಾಜಕಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी