ಯೆಶಾಯ 28:18

ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 28

16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).

17ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.

18ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.

19ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.

20ಮೈ ಚಾಚುವದಕ್ಕೆ ಅವನ ಹಾಸಿಗೆ ಚಿಕ್ಕದಾಗಿರು ವದು. ಮುದುರಿಕೊಂಡು ಮಲಗೇನಂದರೆ ಹೊದಿ ಕೆಯ ಅಗಲ ಸಾಲದು;

ಯೆಶಾಯ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी