ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.
23ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು.
24ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.
25ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.
26ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.
27ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ