ಯೆಹೆಜ್ಕೇಲನು 18:30

ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 18

28ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.

29ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ.

30ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.

31ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?

32ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.

ಯೆಹೆಜ್ಕೇಲನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी