ಯೆಹೆಜ್ಕೇಲನು 12:17

ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 12

15ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.

16ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.

17ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

18ಮನುಷ್ಯಪುತ್ರನೇ, ನಿನ್ನ ರೊಟ್ಟಿ ಯನ್ನು ನಡುಕದಿಂದ ತಿನ್ನು ಮತ್ತು ನೀರನ್ನು ದಿಗಿಲಿ ನಿಂದಲೂ ಎಚ್ಚರಿಕೆಯಿಂದಲೂ ಕುಡಿ.

19ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.

ಯೆಹೆಜ್ಕೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी