ಯೆಶಾಯ 36:9

ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.

ಸಂದರ್ಭದೊಂದಿಗೆ ಓದಿ · ಯೆಶಾಯ 36

7ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?

8ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ. ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು.

9ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.

10ಈ ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ಈ ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು.

11ಆಗ ಎಲ್ಯಾಕೀಮ್‌, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.

ಯೆಶಾಯ 36 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी