ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ?
2ಆಗ ಸಭೆಗೆ ನೀರಿಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿ ಕೊಂಡರು.
3ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.
4ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ?
5ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
6ಆಗ ಮೋಶೆಯೂ ಆರೋನನೂ ಸಭೆಯ ಎದುರಿ ನಿಂದ ಸಭೆಯ ಗುಡಾರದ ಬಾಗಲಿನೊಳಗೆ ಹೋಗಿ ಬೋರಲು ಬಿದ್ದರು; ಕರ್ತನ ಮಹಿಮೆಯು ಅವರಿಗೆ ಕಾಣಬಂತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ