ದಾನಿಯೇಲನು 11:19

ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 11

17ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನನ್ನು ಎದುರುಗೊಳ್ಳುವನು. ಪ್ರಮಾಣಿ ಕರು ಅವನೊಂದಿಗಿರುವರು; ಹೀಗೆ ಅವನು ಮಾಡು ವನು. ಮತ್ತು ಹೆಣ್ಣು ಮಗಳನ್ನು ಕೆಡಿಸುವದಕ್ಕೆ ಅವನಿಗೆ ಕೊಡುವನು. ಆದರೆ ಅವಳು ಅವನ ಕಡೆಗೆ ನಿಲ್ಲುವ ದಿಲ್ಲ, ಅವನಿಗಾಗಿ ಇರುವದಿಲ್ಲ.

18ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ಆ ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು.

19ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.

20ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.

21ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.

ದಾನಿಯೇಲನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी