ಎಸ್ತೇರಳು 8:13

ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ಆ ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಈ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳ ಲ್ಪಟ್ಟಿತು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 8

11ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ

12ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.

13ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ಆ ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಈ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳ ಲ್ಪಟ್ಟಿತು.

14ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.

15ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್‌ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.

ಎಸ್ತೇರಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी