ಆದಿಕಾಂಡ 19:5

ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 19

3ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.

4ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್‌ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.

5ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.

6ಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು--

7ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ.

ಆದಿಕಾಂಡ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी