ಯೋಹಾನನು 12:4

ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು--

ಸಂದರ್ಭದೊಂದಿಗೆ ಓದಿ · ಯೋಹಾನನು 12

2ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.

3ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.

4ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು--

5ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.

6ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ , ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.

ಯೋಹಾನನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी