ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?
15ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.
16ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
17ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?
18ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ.
19ಆದಕಾರಣ ಸಬ್ಬತ್ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ