ಧರ್ಮೋಪದೇಶಕಾಂಡ 12:5

ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 12

3ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.

4ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ.

5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.

6ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.

7ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.

ಧರ್ಮೋಪದೇಶಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी