ಇದಲ್ಲದೆ ಮತ್ತೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
6ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
7ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
8ಇದಲ್ಲದೆ ಮತ್ತೆ ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ--
9ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ಕರ್ತನು ಹೀಗೆ ಹೇಳುವನೆಂದು ಹೇಳು--ಕತ್ತಿಯು, ಆ ಒಂದು ಕತ್ತಿಯು ಹದಮಾಡ ಲ್ಪಟ್ಟಿದೆ; ಮೆರುಗು ಸಹ ಮಾಡಲ್ಪಟ್ಟಿದೆ;
10ಅದು ಕೊಂದೇ ಕೊಲ್ಲುವ ಹಾಗೆ ಹದಮಾಡಲ್ಪಟ್ಟಿದೆ; ಥಳಥಳಿಸುವ ಹಾಗೆ ಮಸೆಯಲ್ಪಟ್ಟಿದೆ; ಹಾಗಾದರೆ ನಾವು ಸಂತೋಷಪಡಬಹುದೋ? ನನ್ನ ಮಗನ ಕೋಲು ಪ್ರತಿಯೊಂದು ಮರವನ್ನು ತಿರಸ್ಕಾರ ಮಾಡು ತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ