೧ ಸಮುವೇಲನು 25:26

ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 25

24ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು.

25ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.

26ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.

27ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.

28ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.

೧ ಸಮುವೇಲನು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी