(ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ.
7ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.
8ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
9(ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ.
10ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
11ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ