ಯೆರೆಮಿಯ 3:15

ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 3

13ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.

14ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.

15ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.

16ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.

17ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.

ಯೆರೆಮಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी