ಯಾಜಕಕಾಂಡ 9:8

ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 9

6ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು.

7ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು.

8ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು.

9ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು.

10ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು.

ಯಾಜಕಕಾಂಡ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी