ಯೆಶಾಯ 63:12

ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?

ಸಂದರ್ಭದೊಂದಿಗೆ ಓದಿ · ಯೆಶಾಯ 63

10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.

11ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?

12ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?

13ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.

14ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.

ಯೆಶಾಯ 63 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी