ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
11ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್).
12ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು.
13ಆಗ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
14ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
15ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ