ವಿಮೋಚನಕಾಂಡ 10:17

ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 10

15ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.

16ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.

17ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.

18ಆಗ ಅವನು ಫರೋಹನನ್ನು ಬಿಟ್ಟುಹೋಗಿ ಕರ್ತನನ್ನು ಬೇಡಿಕೊಂಡನು.

19ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ.

ವಿಮೋಚನಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी