ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--
19ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು.
20ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು.
21ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--
22ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು.
23ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ