ಯೋವೇಲ 1:6

ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.

ಸಂದರ್ಭದೊಂದಿಗೆ ಓದಿ · ಯೋವೇಲ 1

4ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ.

5ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ.

6ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು.

7ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.

8ಯೌವನದ ಗಂಡನಿಗೋಸ್ಕರ ಗೋಣೀತಟ್ಟು ಧರಿಸಿದ ಕನ್ಯೆಯ ಹಾಗೆ ಪ್ರಲಾಪಿಸು.

ಯೋವೇಲ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी