ಲೂಕನು 16:17

ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ.

ಸಂದರ್ಭದೊಂದಿಗೆ ಓದಿ · ಲೂಕನು 16

15ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.

16ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.

17ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ.

18ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.

19ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.

ಲೂಕನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी