ಪ್ರಕಟನೆ 8:6

ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 8

4ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.

5ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.

6ಏಳು ತುತೂರಿಗಳಿದ್ದ ಏಳು ಮಂದಿ ದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.

7ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.

8ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು;

ಪ್ರಕಟನೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी