ಯೆಹೆಜ್ಕೇಲನು 22:5

ಅಶುದ್ಧ ಹೆಸರುಳ್ಳವಳೇ, ಬಹಳ ತೊಂದರೆಗೊಳಗಾದವಳೇ, ನಿನಗೆ ಹತ್ತಿರದವರೂ ದೂರದವರೂ ನಿಂದಿಸುವರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 22

3ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ.

4ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ.

5ಅಶುದ್ಧ ಹೆಸರುಳ್ಳವಳೇ, ಬಹಳ ತೊಂದರೆಗೊಳಗಾದವಳೇ, ನಿನಗೆ ಹತ್ತಿರದವರೂ ದೂರದವರೂ ನಿಂದಿಸುವರು.

6ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.

7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.

ಯೆಹೆಜ್ಕೇಲನು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी