ಯೆಹೆಜ್ಕೇಲನು 25:16

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 25

14ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.

15ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.

16ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;

17ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.

ಯೆಹೆಜ್ಕೇಲನು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी